ಜಿಪಂ, ತಾಪಂ ಚುನಾವಣೆ – ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಜಿಲ್ಲಾ ಪಂಚಾಯತ್​ ಮತ್ತು ತಾಲೂಕು ಪಂಚಾಯತ್​ ಸಾರ್ವತ್ರಿಕ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ.

ಜೂನ್​ 23ರೊಳಗೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ ಆಯೋಗಕ್ಕೆ ಸಲ್ಲಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿತ್ತು.

ಮತದಾರರ ಪಟ್ಟಿ ಮುದ್ರಣದ ಬಗ್ಗೆ ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೆ ಹೊಸ ಸುತ್ತೋಲೆ ಹೊರಡಿಸಿದೆ.

ಮತದಾರರ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜುಲೈ 4 ಕಡೆಯ ದಿನ. ಆ ಆಕ್ಷೇಪಣೆಗಳನ್ನು ಇತ್ಯರ್ಥ್ಯಪಡಿಸಲು ಜುಲೈ 7 ಕಡೆಯ ದಿನ. 

ಅಕ್ಷೇಪಣೆಗಳನ್ನು ಇತ್ಯರ್ಥ್ಯಪಡಿಸಿದ ನಂತರ ಮುದ್ರಕರಿಂದ ಅಗತ್ಯ ಬದಲಾವಣೆಯನ್ನು ಮಾಡಿಸಿ ಅಂತಿಮ ಚೆಕ್​ಲಿಸ್ಟ್​ ಪಡೆದುಕೊಂಡು ಕ್ಷೇತ್ರದ ವ್ಯಾಪ್ತಿಯಲ್ಲಿ ಪರಿಶೀಲಿಸಲು ಕಡೆಯ ದಿನ ಜುಲೈ 12.

ಆ ಬಳಿಕ ಚುನಾವಣಾ ಆಯೋಗ ನಿಗದಿಪಡಿಸುವ ದಿನಾಂಕದಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗ ಸೂಚಿಸಿದೆ.